Latest

*ಹೆಚ್ಚು ಜನರಿಗೆ ತಲುಪಿಸಬೇಕೆನ್ನುವ ಕಾರಣಕ್ಕೆ ಗೃಹಲಕ್ಷ್ಮೀ ಅರ್ಜಿ ವಿಳಂಬ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ 5 ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ವಿಳಂಬವಾಗತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಜನರಿಗೆ ತಲುಪಬೇಕು ಹಾಗೂ ಸರಳವಾಗಿ ಸಿಗಬೇಕು ಎಂಬ ಕಾರಣಕ್ಕೆ ಯೋಜನೆಯಲ್ಲಿ ಹಲವು ಬದಲಾವಣೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚಿಸಿದ್ದೇವೆ ಎಂದು ಹೇಳಿದರು.

Home add -Advt

ಪ್ರತ್ಯೇಕ್ ಆಪ್ ಕೂಡ ಸಿದ್ಧಪಡಿಸಲು ಸೂಚಿಸಲಾಗಿದೆ. ಈ ಎಲ್ಲಾ ಕಾರಣದಿಂದಾಗಿ ಯೋಜನೆಗೆ ಅರ್ಜಿ ಸಲ್ಲಿಕೆ ಕೊಂಚ ವಿಳಂಬವಾಗುತ್ತಿದೆ. ಆಗಸ್ಟ್ 17 ಅಥವಾ 18ರಿಂದ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ ಎಂದು ತಿಳಿಸಿದರು.


Related Articles

Back to top button