Kannada NewsKarnataka NewsLatestPolitics

*ನಕಲಿ ಅರ್ಜಿಗಳ ಬಗ್ಗೆ ಎಚ್ಚರ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವ್ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದರು. ಯೋಜನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದರು.

ನಕಲಿ ಅರ್ಜಿ ಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button