*ಗೃಹಲಕ್ಷ್ಮಿ ಯಶಸ್ಸಿಗೆ ಪಣ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯವೈಖರಿಗೆ ಮೆಚ್ಚುಗೆ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿದೆ.
ಕಾರ್ಯಕ್ರಮ ಸ್ಥಳಾಂತರಗೊಂಡ ಬೆನ್ನಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೈಸೂರಿಗೆ ಧಾವಿಸಿ ಕಾರ್ಯಕ್ರಮದ ಸಂಪೂರ್ಣ ವಿವರ ಪಡೆದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಅಲ್ಲದೆ, ಕಾರ್ಯಕ್ರಮಕ್ಕೆ ಬೇಕಾದ ಸಿದ್ಧತೆ ಹಾಗೂ ಅಗತ್ಯತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಾಳೆ ನಿಗದಿಯಾಗಿದ್ದ ಕಾರ್ಯಕ್ರಮದ ಸ್ಥಳ ವೀಕ್ಷಣೆಯನ್ನು ಸಚಿವ ಮಹದೇವಪ್ಪ ಹಾಗೂ ಅಧಿಕಾರಿಗಳೊಂದಿಗೆ ಇಂದೇ ಮಾಡಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರ್ಯವೈಖರಿಗೆ ಪಕ್ಷದ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ರಿಯಾಶೀಲ ಸಚಿವೆ ಎಂದ ಎಚ್‌ಸಿಎಂ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ರಿಯಾಶೀಲ ಸಚಿವೆ, ಸದಾ ಚಟುವಟಿಕೆಯಿಂದ ಇರುತ್ತಾರೆ. ಅವರ ಸಾರಥ್ಯದಲ್ಲೇ ಮೈಸೂರಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಸಚಿವರೇ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವ ಮಹದೇವಪ್ಪ ಹೇಳಿದರು.
ಬೆಳಗಾವಿಯಲ್ಲಿ ಕಾರ್ಯಕ್ರಮ ನಿಗದಿಯಾಗಿದ್ದರೂ ವಿವಿಧ ಕಾರಣಗಳಿಂದ ಮೈಸೂರಿಗೆ ಸ್ಥಳಾಂತರ ಗೊಂಡಿದೆ. ಬೆಳಗಾವಿಯಲ್ಲಿ ಕಾರ್ಯಕ್ರಮಕ್ಕೆ ಸಂಪೂರ್ಣ ಸಿದ್ಧತೆ ಕೈಗೊಳ್ಳಲಾಗಿತ್ತು. ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೇ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಅವರೇ ಸಂಪೂರ್ಣ ಜವಾಬ್ದಾರಿ ಹೊರುವರು, ಅವರಿಗೆ ಜಿಲ್ಲೆಯ ಶಾಸಕರು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ