*BREAKING: ಬೆಂಗಳೂರು ಒನ್ ಸೆಂಟರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ; CDPO ತರಾಟೆಗೆ ತೆಗೆದುಕೊಂಡ ಸಚಿವೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ ಬರಬೇಕಾಗಿದ್ದ ಹಣ ಹಲವು ಫಲಾನುಭವಿಗಳ ಖಾತೆಗೆ ಬಂದಿಲ್ಲ ಎಂಬ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಬೆಂಗಳೂರು ಒನ್ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬೆಂಗಳೂರು ಒನ್ ಸೆಂಟರ್ ಗೆ ಭೇಟಿ ನೀಡಿದ ಸಚಿವರು, ನೊಂದಣಿ ಪ್ರಕ್ರಿಯೆಗಳನ್ನು ಪರಿಶೀಲಿಸಿ, ಪ್ರತಿ ಜಿಲ್ಲೆಗಳಿಂದಲೂ ಮಾಹಿತಿ ಪಡೆದುಕೊಂಡರು.
ಈ ವೇಳೆ ಕಲಬುರ್ಗಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ಹಲವು ಅರ್ಜಿಗಳು ಬಾಕಿ ಇರುವುದನ್ನು ಗಮನಿಸಿದ ಸಚಿವರು ಸಿಡಿಪಿಒರನ್ನು ತರಾಟೆಗೆ ತೆಗೆದುಕೊಂಡರು. ಕಲಬುರ್ಗಿ ಜಿಲ್ಲೆಯಲ್ಲಿಯೇ 14,000 ಗೃಹಲಕ್ಷ್ಮೀ ಯೋಜನೆ ಅರ್ಜಿ ಬಾಕಿ ಇದೆ. ಆದಷ್ಟು ಬೇಗ ಅರ್ಜಿ ವಿಲೇವಾರಿ ಮಾಡಲು ಏನು ಸಮಸ್ಯೆ? ಯಾವ ಕಾರಣಕ್ಕೆ ಇಷ್ಟೊಂದು ಅರ್ಜಿಗಳು ಬಾಕಿ ಇವೆ? ಎಂದು ಪ್ರಶ್ನಿಸಿದ್ದಾರೆ.
ಈ ವೇಳೆ ಕಲಬುರ್ಗಿ ಸಿಡಿಪಿಒ ವಾರದೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ