
ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣವನ್ನು ಮಹಿಳೆಯೊಬ್ಬರು ಶಾಲೆಯ ಧ್ವಜಸ್ತಂಭ ನಿರ್ಮಾಣಕ್ಕೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶ್ಯಾಮಲಾ ತಿಮ್ಮಪ್ಪ ಗೌಡ ಎಂಬ ಮಹಿಳೆ ಗೃಹಲಕ್ಷ್ಮೀ ಯೋಜನೆ ಹಣದಿಂದ ಅಂಕೋಲಾ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಧ್ವಜಸ್ತಂಭ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.
ಪ್ರತಿ ವರ್ಷ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಕಾರ್ಯಕ್ರಮಗಳು ನಡೆಯುವಾಗ ಶಾಲೆಯಲ್ಲಿ ಧ್ವಜಸ್ತಂಭ ಇಲ್ಲದಿರುವುದನ್ನು ಶ್ಯಾಮಲಾ ಗಮನಿಸಿದ್ದರು. ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಹಣವನ್ನು ಧ್ವಜಸ್ತಂಭ ನಿರ್ಮಾಣಕ್ಕೆ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯಿಂದ ತಮ್ಮ ಖಾತೆಗೆ ಬಂದ 20,000 ಹಣವನ್ನು ಸಂಪೂರ್ಣವಾಗಿ ಶಾಲೆಯ ಧ್ವಜಸ್ತಂಭ ನಿರ್ಮಾಣಕ್ಕೆ ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.
ಮಹಿಳೆಯ ಆದರ್ಶಕ್ಕೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




