*ಗೃಹ ಲಕ್ಷ್ಮೀ ಯೋಜನೆ; ಮೈಸೂರಿನಲ್ಲಿ ಚಾಲನೆ; ಸ್ಪಷ್ಟನೆ ನೀಡಿದ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ಸರಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಉದ್ಘಾಟನೆಯ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಆಗುತ್ತಿರುವುದು ಎಲ್ಲರಿಗೂ ಸಂತೋಷ ಇದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಹಾಗೂ ಮೈಸೂರು ಕರ್ನಾಟಕದ ಅವಿಭಾಜ್ಯ ಅಂಗ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹ ಲಕ್ಷ್ಮೀ ಯೋಜನೆ ಉದ್ಘಾಟನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕರು ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಲಿದ್ದಾರೆ ಎಂದರು.
ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿರುವುದಿಂದ ಈಗಾಗಲೇ ಹುಮ್ಮಸ್ಸಿನಿಂದ ಜಿಲ್ಲೆಯ ಎಲ್ಲ ನಾಯಕರು ಗೃಹ ಲಕ್ಷ್ಮೀ ಯೋಜನೆಯ ಉದ್ಘಾಟನೆಗೆ ಕೆಲಸ ಮಾಡುತ್ತಿದ್ದೇವು. ಆದರೆ ಕಾರಣಾಂತರಗಳಿಂದ ಅದು ಮೈಸೂರಿನಲ್ಲಿ ಮಾಡಲು ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಸಚಿವರನ್ನು ಒಂದೇ ದೃಷ್ಟಿಯಿಂದ ನೋಡುತ್ತಾರೆ. ಎಲ್ಲರ ಸಮ್ಮುಖದಲ್ಲಿಯೇ ಮೈಸೂರಿನಲ್ಲಿ ಗೃಹ ಲಕ್ಷ್ಮೀ ಯೋಜನೆ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ