

ಪ್ರಗತಿವಾಹಿನಿ ಸುದ್ದಿ; ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಜಾರಿಗೆ ಸರ್ವಸನ್ನದ್ಧವಾಗಿದೆ.
ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಬೆಳಿಗ್ಗೆ 11:30ಕ್ಕೆ ಚಾಲನೆ ದೊರೆಯಲಿದೆ. ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಬೃಹತ್ ವೇದಿಕೆಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಮನೆ ಯಜಮಾನಿ ಬ್ಯಾಂಕ್ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ. ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆಯಿದ್ದು, ಮಹಾರಾಜಾ ಕಾಲೇಜು ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ