*ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಖರ್ಗೆ *
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ದೊರೆತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಯಾಗುವ ಮೂಲಕ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯಿತು.
ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೀಪ ಬೆಳಗುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು.
ಬೃಹತ್ ವೇದಿಕೆಯಲ್ಲಿ ಸಚಿವರಾದ ಹೆಚ್ ಸಿ ಮಹದೇವಪ್ಪ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ದರ್ಶನ್ ಧ್ರುವನಾರಾಯಣ, ತನ್ವೀರ್ ಸೇಠ್ ಮೊದಲಾದವರು ಉಪಸ್ಥಿತರಿದ್ದರು. ಈ ಮೂಲಕ ಮನೆ ಯಜಮಾನಿ ಬ್ಯಾಂಕ್ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ