

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ದೊರೆತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಲಾಯಿತು.
ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಜಟಲ್ ಬಟನ್ ಒತ್ತುವ ಮೂಲಕ ಗ್ರಿಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ನೀಡಿದರು. ಈ ವೇಳೆ ಮುಖ್ಯಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು, ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ಈ ಮೂಲಕ ಮನೆ ಯಜಮಾನಿಯರ ಖಾತೆಗೆ ಇಂದೇ 2000 ರೂಪಾಯಿ ಹಣ ವರ್ಗಾವಣೆಯಾದಂತಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ