Kannada NewsKarnataka NewsLatestPolitics

*ಗೃಹಲಕ್ಷ್ಮೀ ಯೋಜನೆ; ಕಾರ್ಯಕ್ರಮಕ್ಕೆ ಹರಿದು ಬಂದ ಜನಸಾಗರ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದು, ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಮಹಿಳೆಯರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಕೆಲ ಹೊತ್ತಲ್ಲಿ ಚಾಲನೆ ದೊರೆಯಲಿದೆ. ಅದ್ಧೂರಿ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಅದರಲ್ಲಿಯೂ ಮಹಿಳೆಯರು ಆಗಮಿಸಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

Related Articles

ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದು, ಜನರನ್ನು ನಿಯಂತ್ರಿಸಲು ಪೊಲಿಸ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.

Home add -Advt

Related Articles

Back to top button