Kannada NewsKarnataka NewsLatestPolitics
*ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕ್ಷಣಗಣನೆ; ಅಂತಿಮ ಹಂತದ ಸಿದ್ಧತೆ ಖುದ್ದು ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾಳೆ ಆಗಸ್ಟ್ 30ರಂದು ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಅರಮನೆ ನಗರಿ ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ.

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಸಿದ್ಧತೆಗಳನ್ನು ಖುದ್ದು ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ವೀಕ್ಷಿಸಿದರು.

ಬಳಿಕ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಈ ಕುರಿತು ನಡೆಯುತ್ತಿರುವ ಸಿದ್ಧತೆಗಳ ಬಗೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ