Kannada NewsKarnataka NewsLatest

*ಗೃಹಲಕ್ಷ್ಮೀ ಯೋಜನೆ; ಗುಲಾಬಿ ಬಣ್ಣದಲ್ಲಿ ಕಂಗೊಳಿಸಿದ ವೇದಿಕೆ; ಕುರ್ಚಿಯ ಹೊದಿಕೆಯಿಂದ ಹಿಡಿದು ನೀರಿನ ಬಾಟಲ್ ವರೆಗೂ ಎಲ್ಲವೂ ಪಿಂಕ್ ಮಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಚಾಲನೆ ದೊರೆತಿದೆ. ಕಾರ್ಯಕ್ರಮದ ವೇದಿಕೆ ಸಂಪೂರ್ಣ ಗುಲಾಬಿ ಬಣ್ಣದಲ್ಲಿ ಕಂಗೊಳಿಸಿದ್ದು ವಿಶೇಷವಾಗಿತ್ತು.

ಇಡೀ ವೇದಿಕೆ ಪಿಂಕ್ ಬಣ್ಣದಲ್ಲಿ ಕಂಗೊಳಿಸುತ್ತಿತ್ತು. ವೇದಿಕೆಯುದ್ದಕ್ಕೂ ಮೇಲ್ಬಾಗದಲ್ಲಿ ತ್ರಿವರ್ಣ ಮತ್ತು ಪಿಂಕ್ ಕಾಂಬಿನೇಷನಲ್ಲಿ ಅಲಂಕರಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಮಹಿಳಾ ಕಾರ್ಯಕರ್ತರ ಪಡೆ ಪಿಂಕ್ ಧಿರಿಸಿನಲ್ಲಿತ್ತು. ವೇದಿಕೆಯಲ್ಲಿದ್ದ ಕುರ್ಚಿಗಳಿಗೆ ಪಿಂಕ್ ಹೊದಿಕೆ, ಐಡಿ ಕಾರ್ಡ್, ಟ್ಯಾಗ್ ಗಳು, ನೀರಿನ ಬಾಟಲ್ ಕೂಡ ಪಿಂಕ್ ಬಣ್ಣದ್ದಾಗಿತ್ತು.

ಮಹಿಳಾ ಕಾರ್ಯಕರ್ತೆಯರು ಗುಲಾಬಿ ಬಣ್ಣದ ಸೀರೆಯುಟ್ಟು ರಾಕಿಯನ್ನು ರಾಹುಲ್ ಗಾಂಧಿ ಅವರಿಗೆ ಕಟ್ಟುವ ಮೂಲಕ ರಕ್ಷಾಬಂಧನ ಸಂಭ್ರಮಿಸಿದರು. ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ , ರಾಕಿ ಕಟ್ಟಿಸಿಕೊಂಡಿದ್ದನ್ನು ಪ್ರಸ್ತಾಪಿಸಿದರು. “ನಾನೊಬ್ಬ ಸಹೋದರನಾಗಿ ನಿಮಗೆ ಕೊಟ್ಟ ಮಾತನ್ನು ನಾನು ಉಳಿಸಿಕೊಳ್ಳುತ್ತೇನೆ. ನಮ್ಮ ಸರ್ಕಾರ ಹೇಗಿದ್ದರೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button