Kannada NewsKarnataka NewsLatest

*ಗೃಹಲಕ್ಷ್ಮಿ ಫಲಾನುಭವಿಗಳೇ ಎಚ್ಚರ*: *ಸರ್ಕಾರದಿಂದ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮಿ ಯೋಜನೆಯ ಮರು-ಪರಿಶೀಲನೆ ಹೆಸರಿನಲ್ಲಿ ಒಟಿಪಿ ಹಾಗೂ ಬ್ಯಾಂಕ್ ಖಾತೆ ವಿವರ ಕೇಳುವ ನಕಲಿ ಜಾಲದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ.

ಸದ್ಯಕ್ಕೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಆರಂಭವಾಗಿಲ್ಲ. ಫಲಾನುಭವಿಗಳು ತಮ್ಮ ವೈಯಕ್ತಿಕ ಮಾಹಿತಿ, ಒಟಿಪಿ ಅಥವಾ ಬ್ಯಾಂಕ್ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಇಂತಹ ವಂಚಕರಿಂದ ಎಚ್ಚರದಿಂದಿರುವಂತೆ ಇಲಾಖೆ ಮನವಿ ಮಾಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗೃಹಜ್ಯೋತಿ ಸರ್ವೆಯನ್ನು ನಡೆಸಲಾಗುತ್ತಿದೆ. ಆದರೆ ಗೃಹಲಕ್ಷ್ಮೀ ಯೋಜನೆಯ ಸಮೀಕ್ಷೆ ಇನ್ನೂ ಶುರು ಮಾಡಿಲ್ಲ. ಆದರೆ ಕಾಂಗ್ರೆಸ್​​​ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯ ಮರು-ಪರಿಶೀಲನೆ (Re-verification) ಹಾಗೂ ಸರ್ವೇ ಹೆಸರು ಹೇಳಿಕೊಂಡು ಫಲಾನುಭವಿಗಳಿಂದ ಒಟಿಪಿ (OTP) ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಪಡೆಯುತ್ತಿರುವ ನಕಲಿ ಜಾಲದ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತೀವ್ರ ಎಚ್ಚರಿಕೆ ನೀಡಿದೆ.

ಕೆಲವು ಪ್ರದೇಶಗಳಲ್ಲಿ ಅನಧಿಕೃತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯ ಸರ್ವೇ ನೆಪದಲ್ಲಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ವೈಯಕ್ತಿಕ ರಹಸ್ಯ ಮಾಹಿತಿ ಸಂಗ್ರಹಿಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇಲಾಖೆಯ ಉಪನಿರ್ದೇಶಕರು ಸಾರ್ವಜನಿಕರಿಗೆ ಜಾಗೃತರಾಗಿರಲು ಸೂಚಿಸಿದ್ದಾರೆ.

ಇಲಾಖೆಯು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಕಾರ್ಯವನ್ನು ಸದ್ಯಕ್ಕೆ ಇನ್ನೂ ಪ್ರಾರಂಭಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರದ ಆದೇಶದಂತೆ ಅಧಿಕೃತ ಮರು-ಪರಿಶೀಲನೆ ಆರಂಭವಾದಾಗ ಫಲಾನುಭವಿಯ ಗುರುತನ್ನು ದೃಢೀಕರಿಸಲು ಅವರ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ (OTP) ಮೂಲಕ ಅಥೆಂಟಿಕೇಶನ್ ಮಾಡುವುದು ಅಗತ್ಯವಾಗಿರುತ್ತದೆ.

ಪ್ರಸ್ತುತ ಇಲಾಖೆಯಿಂದ ಯಾವುದೇ ಸರ್ವೇ ಆರಂಭವಾಗದಿರುವುದರಿಂದ, ಯೋಜನೆ ಹೆಸರಿನಲ್ಲಿ ಬರುವ ಅನಧಿಕೃತ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಒಟಿಪಿ (OTP), ಬ್ಯಾಂಕ್ ಖಾತೆ ಸಂಖ್ಯೆ ಅಥವಾ ಇತರ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಬೇಡಿ. ಮಹಿಳೆಯರು ಜಾಅಗೃತರಾಗಿರುವಂತೆ ಸೂಚನೆ ನೀಡಲಾಗಿದೆ.


Related Articles

Back to top button