
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮನ ನಿಲ್ದಣಕ್ಕೆ ಆಗಮಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮೈಸೂರಿಗೆ ತೆರಳಲಿದ್ದು, ಬೆಂಗಳೂರು ಏರ್ ಪೋರ್ಟ್ ನಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಕೆಲವೇ ಹೊತ್ತಲ್ಲಿ ರಾಹುಲ್ ಗಾಂಧಿ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ. ರಾಹುಲ್ ಗಾಂಧಿಯವರಿಗೆ ರಾಖಿ ಕಟ್ಟುವ ಮೂಲಕ ಮಹಿಳಾ ಕಂಗ್ರೆಸ್ ನಾಯಕಿಯರು ಸ್ವಾಅಗತಿಸಲಿದ್ದಾರೆ.
ಮಂಡಕಳ್ಳಿ ಏರ್ ಪೋರ್ಟ್ ನಿಂದ ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ತೆರಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ