Uncategorized

*ಗೃಹಲಕ್ಷ್ಮೀ ಯೋಜನೆ ಅರ್ಜಿಗೆ ಹಣ ಪಡೆದರೆ ಲೈಸನ್ಸ್ ರದ್ದು; ಸಚಿವ ಸಂತೋಷ್ ಲಾಡ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಗೃಹಲಕ್ಷ್ಮೀ ಯೋಜನೆ ನೋಂದಣಿ ಉಚಿತವಾಗಿದ್ದು, ಹಣ ಪಡೆದರೆ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಉಚಿತವಾಗಿ ಅರ್ಜಿ ಸಲ್ಲಿಕೆ ಮಾಡಲು ಅವಕಾಸ ಕಲ್ಪಿಸಲಾಗಿದೆ. ಹಣ ಪಡೆದರೆ ಅಂತಹ ಕೇಂದ್ರಗಳ ಲಸನ್ಸ್ ರದ್ದು ಪಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನನ್ನ ಕ್ಷೇತ್ರದಲ್ಲಿ ಹಲವು ಕೇಂದ್ರಗಳಿಗೆ ಭೇಇ ನೀಡಿ ಪರಿಶೀಲನೆ ನಡೆಸಿದ್ದೇನೆ. ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಗೃಹಲಕ್ಷ್ಮೀ ಯೋಜನೆ ಅರ್ಜಿಗೆ ಯಾರೂ ಹಣ ಕೊಡುವಂತಿಲ್ಲ, ಯಾರದರೂ ಹಣ ಪದೆದ ಬಗ್ಗೆ ಮಾಹಿತಿ ನೀಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button