GIT add 2024-1
Laxmi Tai add
Beereshwara 33

*’ಗೃಹಲಕ್ಷ್ಮೀ’ ಮೂಲಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿದ ಕಾಂಗ್ರೆಸ್ ಸರ್ಕಾರ; ಕರಾವಳಿ ಪ್ರದೇಶದ ಅಭಿವೃದ್ಧಿಗೂ ಬದ್ಧ; ಸಿಎಂ ಸಿದ್ದರಾಮಯ್ಯ*

Anvekar 3
Cancer Hospital 2

ಪ್ರಧಾನಿ ಮೋದಿ ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ; ಸಿಎಂ ಕಿಡಿ

ಪ್ರಗತಿವಾಹಿನಿ ಸುದ್ದಿ: ಬೆಲೆಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ ರೂ.ಗಳ ವೆಚ್ಚದಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ . ಗೃಹಜ್ಯೋತಿ ಯೋಜನೆಯಡಿ 311652 ಜನ ಲಾಭ ಪಡೆಯುತ್ತಿದ್ದು, ಇದಕ್ಕಾಗಿ 114 ಕೋಟಿ ರೂ. ವ್ಯಯಿಸಲಾಗುತ್ತಿದೆ. ಅನ್ನಭಾಗ್ಯ 766000 ಜನರಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ. ರಾಜ್ಯದ ಬಡವರಿಗೆ ಅಕ್ಕಿ ನೀಡಲು ನಿರಾಕರಿಸಿದ ಬಿಜೆಪಿಯ ಕೇಂದ್ರ ಸರ್ಕಾರ ಎಂದಿಗೂ ಸಮಾಜಿಕ ನ್ಯಾಯದ ಪರವಾಗಿ ಇಲ್ಲ. ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಕೆಲಸ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳೀಗೆ 4 ರಿಂದ 5 ಸಾವಿರ ರೂ. ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರು.

ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ

ಬಿಜೆಪಿ ಪಕ್ಷದವರು ಗ್ಯಾರಂಟಿಗಳ ಬಗ್ಗೆ ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ. ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ದುಡ್ಡು ಇರಿಸಲು ಸಾಧ್ಯವಿಲ್ಲ ಎಂಬ ಟೀಕೆ ಬಂದಿತು. ಪ್ರಧಾನಿಯವರು ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗುತ್ತದೆ ಎಂದು ನುಡಿದಿದ್ದರು. ಆದರೆ ಈ ವರ್ಷ 36 ಸಾವಿರ ಹಾಗೂ ಮುಂದಿ ವರ್ಷ 52009 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಈ ಬಜೆಟ್ ನಲ್ಲಿ ನಿಗದಿಪಡಿಸಿದ್ದರೂ, ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿಗೆ 1.20 ಲಕ್ಷ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಇಡಲಾಗಿದೆ. ರಾಜ್ಯ ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ

Emergency Service

ರಾಜ್ಯದಿಂದ 4.30 ಲಕ್ಷ ಕೋಟಿ ರೂಗಳನ್ನು ತೆರಿಗೆ ರೂಪದಲ್ಲಿ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 50257 ಕೋಟಿ ಮಾತ್ರ ಬರುತ್ತಿದೆ. ಪ್ರದಾನಿ ಮೋದಿಯವರ ಕಾಲದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದ್ದು, ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆಯವರು ಈ ಬಗ್ಗೆ ಎಂದೂ ಕೇಂದ್ರವನ್ನು ಪ್ರಶ್ನಿಸಿಯೇ ಇಲ್ಲ. ಇಂತಹ ಸಂಸದರನ್ನು ರಾಜ್ಯದ ಜನ ಆಯ್ಕ ಮಾಡಬೇಕೆ ? ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ನಾವು ಶೇ .98ರಷ್ಟು ಭರವಸೆಗಳನ್ನು ಈಡೇರಿಸಿದ್ದರೆ, ಬಿಜೆಪಿಯವರು ಕೇವಲ ಶೇ.10 ರಷ್ಟು ಈಡೇರಿಸಿದ್ದಾರೆ ಎಂದರು.

ಕರ್ನಾಟಕದಲ್ಲಿ ಗೋ ಬ್ಯಾಕ್ ಬಿಜೆಪಿ ಆಗಬೇಕೆಂದು ಜನರಿಗೆ ಸಿಎಂ ಕರೆ

ನರೇಂದ್ರ ಮೋದಿಯವರು ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ. ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ಅಂದು ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ಅನುದಾನವನ್ನು ಮೀಸಲಿಟ್ಟಿದ್ದೇನೆ. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ. ಈ ರೀತಿ ಜನರ ದಾರಿ ತಪ್ಪಿಸಿ ಮೋದಿಯವರು ಅಧಿಕಾರಕ್ಕೆ ಬರುತ್ತಿದ್ದು, ಈ ಬಾರಿ ಜನರು ರಾಜ್ಯದಲ್ಲಿ ಬಿಜೆಪಿ ಗೋಬ್ಯಾಕ್ ಎನ್ನಬೇಕು ಎಂದು ನೆರೆದಿದ್ದ ಜನರನ್ನು ಕೋರಿದರು.

ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ

ಸಂಸದ ಅನಂತಕುಮಾರ್ ಹೆಗಡೆಯವರು ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವುದಾಗಿ ತಿಳಿಸಿದ್ದರು. ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ. ಇದಕ್ಕೆ ಜನರು ಬಲಿಯಾಗಬಾರದು.ಆದ್ದರಿಂದ ಸಂವಿಧಾನದ ಉಳಿವಿಗಾಗಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದರು.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಬದ್ಧ

ಬಸವಣ್ಣನವರ ತತ್ವಗಳನ್ನಾಧರಿಸಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಾವು ಘೋಷಿಸಿದ್ದೇವೆ. ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್ ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೊಳಿಸಲಾಗುವುದು. ಜನರ ಕಷ್ಟಸುಖಗಳಲ್ಲಿ ಭಾಗಿಯಾಗುವ ಕಾಂಗ್ರೆಸ್ ಪಕ್ಷಕ್ಕೆ ಜನರು ಆಶೀರ್ವಾದ ಮಾಡಬೇಕೆಂದು ಕೋರಿದರು.

Bottom Add3
Bottom Ad 2