ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಚಾಲನೆಗೆ ದಿನಗಣನೆ ಆರಂಭವಾಗಿದ್ದು, ಈವರೆಗೆ ಒಂದು ಕೋಟಿಗೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 1.6 ಕೋಟಿ ಜನರು ನೋಂದಣಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಯಾವುದೇ ಸಮಯ ನಿಗದಿಯಾಗಿಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು ಎಂದರು. ಇದೇ ವೇಳೆ ಡಿಸೆಂಬರ್ ಅಥವಾ ಜನವರಿಯಲ್ಲಿ ಯುವನಿಧಿ ಯೋಜನೆ ಜಾರಿಯಾಗುತ್ತದೆ ಎಂದು ತಿಳಿಸಿದರು.
ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27ರಂದು ಚಾಲನೆ ದೊರೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ