Uncategorized

*ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಗೃಹಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ ಜೂನ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. ಜುಲೈ ತಿಂಗಳಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು.

ಹಾವೇರಿಯಲ್ಲಿ ರೈತರು ಮರಣಹೊಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುತ್ತಿದ್ದು, ಮಳೆ ಹೆಚ್ಚಾಗಿ ಬಿದ್ದಿರುವ ಕಡೆ ತಂಡಗಳನ್ನು ಮಾಡಿಕೊಂಡು ಭೇಟಿ ನೀಡಲಾಗುವುದು. ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

Home add -Advt

ಇದೇ ವೇಳೆ ಇಂದು ಸಚಿವ ಕೃಷ್ಣ ಬೈರೇಗೌಡ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button