
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಒಂದೇ ದಿನದಲ್ಲಿ 60 ಸಾವಿರಕ್ಕೂ ಹೆಚ್ಚು ಮಹಿಳೆಯರು ನೋಂದಣಿ ಮಾಡಿದ್ದಾರೆ.
ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19ರಂದು ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಮೊದಲ ದಿನವೇ 60,222 ಮಹಿಳೆಯರು ನೋಂದಣಿ ಮಾಡಿದ್ದಾರೆ.
ಈ ಪೈಕಿ ಮೊಬೈಲ್ ಆ್ಯಪ್ ಮೂಲಕ 15,276 ಮಹಿಳೆಯರು ನೋಂದಣಿ ಮಾಡಿದ್ದಾರೆ. ವೆಬ್ ಅಪ್ಲಿಕೇಶನ್ ಮೂಲಕ 44,946 ಮಹಿಳೆಯರಿಂದ ನೋಂದಣಿಯಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ