Kannada NewsKarnataka NewsLatestPolitics

*ಗೃಹಲಕ್ಷ್ಮೀ ಯೋಜನೆ ಗೊಂದಲ: ಸದನದಲ್ಲಿ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ಜಮೆಯಾಗದ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಗದ್ದಲ-ಕೋಲಾಹಲಕ್ಕೆ ಕಾರಣವಯಿತು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ಸದಸ್ಯರು, ಎರಡು ತಿಂಗಳ ಗೃಹಲಕ್ಷ್ಮೀ ಹಣ ಫಲಾನುಭವಿಗಳಿಗೆ ಜಮೆಯಾಗಿಲ್ಲ. ಆದರೆ ಸರ್ಕಾರ ಈ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸದನದಲ್ಲಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸದನವನ್ನು ತಪ್ಪು ದಾರಿಗೆ ಎಳೆಯುವ ಉದ್ದೇಶ ನನ್ನದಲ್ಲ. ಅಧಿಕಾರಿಗಳು ನೀಡಿದ ಮಾಹಿತಿಯಲ್ಲಿ ಸದನಕ್ಕೆ ವಿವರಿಸಲಾಗಿತ್ತು. ಆದರೆ ಈ ಬಗ್ಗೆ ಪರಿಶೀಲಿಸಿದಾಗ ಎರಡು ತಿಂಗಳ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂಬುದು ತಿಳಿದುಬಂದಿದೆ. ಈ ಬಗ್ಗೆ ತಪ್ಪಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದರು.

Home add -Advt

ಫೆಬ್ರವರಿ ಹಾಗೂ ಮಾರ್ಚ್ ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಇದನ್ನು ಸರಿಪಡಿಸುತ್ತೇನೆ. ಶೀಘ್ರದಲ್ಲಿಯೇ ಬಾಕಿ ಹಣ ಜಮೆಯಾಗಲಿದೆ ಎಂದು ಹೇಳಿದರು.

Related Articles

Back to top button