Latest

ಬೃಹತ್ ವೇಶ್ಯಾವಾಟಿಕೆ ಜಾಲ ಪೊಲೀಸ್ ಬಲೆಗೆ; 12 ಹೋಟೆಲ್, 11 ಸ್ಪಾಗಳ ಮೇಲೆ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನ್ ಲಾಕ್ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಅನೈತಕ ಚಟುವಟಿಕೆಗಳು ಎಗ್ಗಿಲ್ಲದೇ ಸಾಗಿದ್ದು, ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿರುವ ಪೊಲೀಸರು 291 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊರೊನಾ ಎರಡನೇ ಅಲೆಯ ಲಾಕ್ ಡೌನ್ ತೆರವುಗೊಳಿಸಿದ ಬೆನ್ನಲ್ಲೇ ಕಳೆದ ಒಂದು ತಿಂಗಳಲ್ಲಿ 12 ಹೋಟೆಲ್ ಹಾಗೂ 11 ಸ್ಪಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ಆರೋಪ ಪ್ರಕರಣದ ಸಂಬಂಧ 291ಜನರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಜೂಜಾಟದಲ್ಲಿ ತೊಡಗಿದ್ದ ಆರೋಪಕ್ಕೆ ಸಂಬಂಧಿಸಿ 11 ಕ್ಲಬ್ ಗಳ ಮೇಲೆ ದಾಳಿ ನಡೆಸಿದ್ದು, ಮೂರು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣವನ್ನೂ ಭೇದಿಸಲಾಗಿದೆ ಎಂದು ಹೇಳಿದ್ದಾರೆ.

 

Related Articles

Back to top button