Karnataka NewsLatestPolitics

*ಗೃಹಲಕ್ಷ್ಮಿ ಯೋಜನೆ ಪಡೆಯಲು ಹೊಸ ಅರ್ಹತಾ ಮಾನಡಂಡ: ಅಗತ್ಯವಿರುವ ದಾಖಲೆಗಳೇನು?*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಅರ್ಹತಾ ಮಾನದಂಡಗಳು ಬಹಿರಂಗಗೊಂಡಿವೆ. ಈ ಯೋಜನೆಯಡಿ, ಕುಟುಂಬದ ಯಜಮಾನಿ ಮಹಿಳೆಯರಿಗೆ ಹಣ ಸಿಗಲಿದ್ದು, ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳು:

Home add -Advt

ಕುಟುಂಬದ ಯಜಮಾನಿಯ ಆಧಾರ್ ಕಾರ್ಡ್ ಪ್ರತಿ
ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಪಾಸ್‌ಬುಕ್
ಯಜಮಾನಿಯ ಹೆಸರಿನಲ್ಲಿರುವ ರೇಷನ್ ಕಾರ್ಡ್

ಯೋಜನೆಯ ಲಾಭ ಪಡೆಯಲು ಕೆಲವು ನಿರ್ಬಂಧಗಳನ್ನು ಸಹ ವಿಧಿಸಲಾಗಿದೆ. ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಅವರು ಈ ಯೋಜನೆಗೆ ಅನರ್ಹರಾಗುತ್ತಾರೆ. ಅದೇ ರೀತಿ, ಯಜಮಾನಿ ಅಥವಾ ಅವರ ಪತಿ ಜಿಎಸ್‌ಟಿ ಪಾವತಿದಾರರಾಗಿದ್ದರೂ ಸಹ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಿಲ್ಲ.

Related Articles

Back to top button