Kannada NewsKarnataka NewsLatestPolitics
*ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ; ಸಹಾಯವಾಣಿ ಆರಂಭ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಿದ್ದು, ಮನೆ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ಮಹತ್ವದ ಯೋಜನೆ ಇದಾಗಿದೆ.
ಯೋಜನೆ ಬಗ್ಗೆ ಯಾವುದೇ ಗೊಂದಲಗಳು ಬೇಡ. ಯಾವುದೆ ಮಧ್ಯವರ್ತಿಗಳ ಸಹಾಯ ಪಡೆಯುವ ಅಗತ್ಯವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಯೋಜನೆ ಲಾಭ ಪಡೆಯಲು ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 8147500500ಗೆ ಪಡಿತರ ಸಂಖ್ಯೆಯನ್ನು SMS ಮಾಡಿದರೆ ತಕ್ಷಣ ನೋಂದಣಿ ಸ್ಥಳ ಗೊತ್ತುಪಡಿಸಿದ ದಿನಾಂಕ, ಸಮಯದ ಬಗ್ಗೆ ಸಂದೇಶ ಬರುತ್ತದೆ.
ಇನ್ನೂ ಗೊಂದಲಗಳಿದ್ದರೆ 1902 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.




