ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ 1,09,07,48,050 ರೂ. ಲಾಭಾಂಶ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂ. ಗಳ ದೇಣಿಗೆಯ ಚೆಕ್‌ಗಳನ್ನು ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
ನಂತರ ಮುಖ್ಯಮಂತ್ರಿಯವರು ರೇಷ್ಮೆ ಮತ್ತು ಗಣಿ ಇಲಾಖೆಗೆ ಸಂಬಂಧಿಸಿದ ಸಭೆ ನಡೆಸಿದರು. ಸಭೆಯಲ್ಲಿ ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ರೇಷ್ಮೆ ಮತ್ತು ಪಶುಸಂಗೋಪನಾ ಸಚಿವ ವೆಂಕಟೇಶ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ರೇಷ್ಮೆ ಇಲಾಖೆ ಕಾರ್ಯದರ್ಶಿ ಶಮ್ಲಾ ಇಕ್ಬಾಲ್, ಎಂ.ಎಸ್.ಎಂ. ಇ ಇಲಾಖೆ ಕಾರ್ಯದರ್ಶಿ ವಿಪುಲ್ ಬನ್ಸಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ