LatestNationalPolitics

*ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ: HDK ಹರ್ಷ*

ಪ್ರಗತಿವಾಹಿನಿ ಸುದ್ದಿ: ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಯನ್ನು ಅನುಮೋದಿಸಿದೆ. ಇದು ಜನಜೀವನ ಸುಲಭಗೊಳಿಸುವುದು ಮತ್ತು #ಆತ್ಮನಿರ್ಭರಭಾರತ್ ಅನ್ನು ಬಲಪಡಿಸುವ ಒಂದು ಪರಿವರ್ತನಾತ್ಮಕ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಹೊಸ ಸುಧಾರಣೆಯೊಂದಿಗೆ ಜಿಎಸ್‌ಟಿ ಈಗ ಕೇವಲ ಎರಡು ಸ್ಲ್ಯಾಬ್‌ಗಳನ್ನು ಹೊಂದಿದ್ದು, ಅದು 5% ಮತ್ತು 18% ಆಗಿರುತ್ತದೆ. ದೈನಂದಿನ ಜೀವನದ ಅಗತ್ಯ ವಸ್ತುಗಳು, ಆರೋಗ್ಯ ರಕ್ಷಣೆ, ಶಿಕ್ಷಣ, ಕೃಷಿ ಮತ್ತು ವಾಹನಗಳು ಸಹ ಸುಲಭವಾಗಿ ಕೈಗೆಟುಕುವಂತಾಗುತ್ತವೆ. ಜತೆಗೆ, ಉದ್ಯಮಗಳು ಹಾಗೂ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆ (MSME) ಗಳು ಭಾರೀ ಉತ್ತೇಜನವನ್ನು ಪಡೆಯುತ್ತವೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ವ್ಯವಸ್ಥೆಯನ್ನು ಸರಳಗೊಳಿಸಿ ಮತ್ತಷ್ಟು ಸುಲಭಗೊಳಿಸುವ ಮತ್ತು ಭಾರತದಾದ್ಯಂತ ಪ್ರತೀ ಮನೆಗೂ ಸಂತೋಷ ಉಂಟು ಮಾಡುವ ನೈಜ ಜನಕೇಂದ್ರಿತ ಸುಧಾರಣೆ ಇದಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Home add -Advt

Related Articles

Back to top button