ಪ್ರಗತಿವಾಹಿನಿ ಸುದ್ದಿ, ಮೈಸೂರು: ನಗರದಲ್ಲಿ ಜೆಡಿಎಸ್ ಪಕ್ಷದ ಎರಡು ದಿನಗಳ ಪಕ್ಷ ಸಂಘಟನೆ ಕಾರ್ಯಾಗಾರ ಆರಂಭವಾಗಿದ್ದು ಶಾಸಕ ಜಿ. ಟಿ. ದೇವೇಗೌಡರು ಕಾರ್ಯಾಗಾರಕ್ಕೆ ಗೈರಾಗಿರುವುದು ಹತ್ತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಬುಧವಾರ ಎರಡು ದಿನಗಳ ಕಾರ್ಯಾಗಾರ ಪ್ರಾರಂಭಗೊಂಡಿತು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಾಗಾರ ನಡೆಯುತ್ತಿದೆ.ಜಿ. ಟಿ. ದೇವೇಗೌಡರು ಮಂಗಳವಾರ ರಾತ್ರಿಯೇ ಕ್ಷೇತ್ರ ಬಿಟ್ಟು ಬೇರೆಡೆ ಹೋಗಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಜಿ. ಟಿ. ದೇವೇಗೌಡರ ಮನವೊಲಿಕೆ ಮಾಡಲು ಪ್ರಯತ್ನ ನಡೆಸಿದ್ದು, ಅದು ವಿಫಲವಾಗಿದೆ. ಕಾರ್ಯಾಗಾರ ಆಯೋಜನೆ ಜವಾವ್ದಾರಿಯನ್ನು ಕೆ. ಆರ್. ನಗರ ಶಾಸಕ ಸಾ. ರಾ. ಮಹೇಶ್‌ಗೆ ನೀಡಲಾಗಿದೆ. ಇದು ಜಿ. ಟಿ. ದೇವೇಗೌಡರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದೆ ಎಂಬ ಮಾಹಿತಿ ಇದೆ.
ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ, “ಜಿ. ಟಿ. ದೇವೇಗೌಡರು ನನ್ನ ಅನುಮತಿ ಪಡೆದು ಕಾರ್ಯಾಗಾರಕ್ಕೆ ಗೈರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಾಗಾರಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದ್ದಾರೆ.
ಪಿ.ಎಸ್.ಐ ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು: ಸಿಎಂ ಬೊಮ್ಮಾಯಿ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ