Karnataka NewsLatestPolitics

*ಆಡಿಟರ್ ವರದಿ ಕೈಸೇರಿದ ಬಳಿಕ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಕಡ್ಡಾಯವಾಗಿ ಮುಂದುವರೆಯಲಿವೆ. ಆದರೆ, ಇವುಗಳ ಸಮರ್ಪಕ ಅನುಷ್ಠಾನದ ಕುರಿತು ಸಿಎಜಿ ವರದಿ ಬಂದ ನಂತರ ಸಮಗ್ರವಾಗಿ ಪರಿಶೀಲನೆ ನಡೆಸಿ, ಅಗತ್ಯ ಪರಿಷ್ಕರಣೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸುತ್ತದೆ ಎನ್ನುವುದೆಲ್ಲಾ ಸುಳ್ಳು. ಆದರೆ, ಯೋಜನೆಯ ಲಾಭ ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೇ ಇಲ್ಲವೇ ಎಂಬುವುದನ್ನು ನಾವು ಪರಿಶೀಲನೆ ಮಾಡುತ್ತಿದ್ದೇವೆ.

ಕಾಂಪ್ಲೋಲರ್ ಆ್ಯಂಡ್‌ಆ ಡಿಟರ್ ಜನರಲ್ ವರದಿ ಕೈ ಸೇರಿದ ನಂತರ ಯಾವ ಭಾಗದಲ್ಲಿ ಲೋಪದೋಷಗಳಾಗಿವೆ ಎಂಬುದನ್ನು ನೋಡಿಕೊಂಡು ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುತ್ತೇವೆ. ಇದೇ ವೇಳೆ ಗೃಹ ಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಸದ್ಯದಲ್ಲೇ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button