Film & Entertainment

*ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಲಾಗಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಆರೋಪಿ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ಮತ್ತೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ.

Home add -Advt

ಸೆ.12ರವರೆಗೆ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ವಿಚಾರಣೆ ಮುಂದೂಡಿದೆ.


Related Articles

Back to top button