Karnataka NewsLatestPolitics

*ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು*

ಪ್ರಗತಿವಾಹಿನಿ ಸುದ್ದಿ: “ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು.

ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಕುರಿತು ಚರ್ಚೆ ವೇಳೆ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬೇಕು ಎಂದು ಹೇಳಿದಾಗ, ಶಿವಕುಮಾರ್ ಅವರು ತಿರುಗೇಟು ನೀಡಿದರು.

“ಸುರೇಶ್ ಅವರೇ ನೀವು ಹಿರಿಯ ನಾಯಕರಿದ್ದೀರಿ, ಮಾಜಿ ನಿಮ್ಮ ಜತೆ ಮಾಜಿ ಡಿಸಿಎಂ ಇದ್ದಾರೆ. ಈ ಅಭಿಪ್ರಾಯ ಕೇವಲ ನಿಮ್ಮ ವೈಯಕ್ತಿಕವಲ್ಲ. ಅದು ಪಕ್ಷದ ಅಭಿಪ್ರಾಯ. ನೀವು ಏನು ಹೇಳುವಿರೋ ಅದರ ಬಗ್ಗೆ ಚಿಂತನೆ ನಡೆಸೋಣ. ನೀವು ಹೇಳುತ್ತಿರುವುದು ಸರಿಯಿಲ್ಲ ಎಂದು ಹೇಳುತ್ತಿಲ್ಲ. ಈ ಬಜೆಟ್ ಅಧಿವೇಶನದ ಒಳಗೆಯೇ ನಿಮ್ಮ ತೀರ್ಮಾನ ತಿಳಿಸಿ” ಎಂದು ಹೇಳಿದರು.

ಕೋಳಿ ಕೇಳಿ ಖಾರ ಅರೆದಂತಿದೆ, ಗ್ಯಾರಂಟಿ ಕೊಡುವಾಗ ನಮ್ಮನ್ನು ನೀವು ಕೇಳಿದ್ರ ಎಂದು ಸುರೇಶ್ ಅವರು ಪ್ರತಿಕ್ರಿಯೆ ನೀಡಿದಾಗ, “ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆ ಆದರೂ ಬಿಡುವುದಿಲ್ಲ ಎಂದು ಹೇಳಿದ್ದರು. ಆನಂತರ ಅದು ಕಡಿಮೆ ಆಯಿತು, ಇದು ಕಡಿಮೆ ಆಯಿತು ಎಂದವರು ನೀವು. ಅದಕ್ಕೆ ಆರು ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ನಿಮ್ಮ ಮಾತನ್ನೂ ಕೇಳಿ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ” ಎಂದು ತಿರುಗೇಟು ನೀಡಿದರು.

Home add -Advt

“ಇತ್ತೀಚೆಗೆ ಅಸ್ಸಾಂ ರಾಜ್ಯಕ್ಕೆ ಹೋಗಿದ್ದೆ. ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಇಲ್ಲ. ಈಗ ಚಾಟ್ ಜಿಪಿಟಿಯಲ್ಲಿ ಹೌ ಟು ವಿನ್ ಗುಜರಾತ್ ಎಲೆಕ್ಷನ್ ಎಂದು ಹಾಕು, ಕರ್ನಾಟಕ ಮಾದರಿ ಅನುಸರಿಸಿ ಎಂದು ಬರಲಿಲ್ಲ ಎಂದರೆ ಕೇಳಿ. ಸರ್ಕಾರಿ ಅಧಿಕಾರಿಗಳಿಗೆ, ಉಳ್ಳವರಿಗೆ ಗ್ಯಾರಂಟಿ ಯೋಜನೆಗಳು ಬೇಕಿಲ್ಲ. ನಾವು ಒಂದು ತೀರ್ಮಾನ ಮಾಡಿದ್ದೇವೆ. ಅದೇ ರೀತಿ ನೀವು ಒಂದು ತೀರ್ಮಾನಕ್ಕೆ ಬನ್ನಿ” ಎಂದರು.

ಮರುಚಿಂತನೆ ಮಾಡಿ ಎಂದು ಮುಖ್ಯಮಂತ್ರಿಯವರಿಗೆ ಹೇಳಿದ್ದೇ ಎಂದು ಸುರೇಶ್ ಗೌಡ ಅವರು ಹೇಳಿದಾಗ, “ಪಕ್ಕದಲ್ಲಿ, ಡಿನ್ನರ್ ಮೀಟಿಂಗ್, ಡೇ ಲೈಟ್ ಮೀಟಿಂಗ್ ಅಲ್ಲಿ, ಬೇರೆ, ಬೇರೆ ಮೀಟಿಂಗ್ ಅಲ್ಲಿ ಹೇಳಿರುವುದು ಬೇಡ. ನಿಮ್ಮ ತೀರ್ಮಾನವನ್ನ ವಿಧಾನಸಭೆ, ಜನ, ದೇಶ ನೋಡಬೇಕು” ಎಂದರು.

ನನ್ನ ಬಗ್ಗೆ ಮಾತನಾಡದಿದ್ದರೆ ಬಿಜೆಪಿ ಸ್ನೇಹಿತರಿಗೆ ನಿದ್ದೆ, ಸ್ಫೂರ್ತಿ ಬರುವುದಿಲ್ಲ:

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಒಬ್ಬರ ಮುಖ ಮತ್ತೊಬ್ಬರು ನೋಡುವುದಿಲ್ಲ ಎಂದು ಹೇಳಿದಾಗ ಎದ್ದು ಮಾತನಾಡಿದ ಶಿವಕುಮಾರ್ ಅವರು, “ಬಿಜೆಪಿಯಲ್ಲಿರುವ ನನ್ನ ಕೆಲವು ಸ್ನೇಹಿತರಿಗೆ ನನ್ನನ್ನು ಸ್ಮರಿಸದಿದ್ದರೆ ಅವರಿಗೆ ಸಮಾಧಾನವಿಲ್ಲ, ನಿದ್ದೆ ಬರುವುದಿಲ್ಲ, ಸಂತೋಷ ಆಗುವುದಿಲ್ಲ, ಸ್ಫೂರ್ತಿ ಬರುವುದಿಲ್ಲ. ಹೀಗಾಗಿ ನನ್ನ ಸದಾ ನೆನಪಿಸಿಕೊಳ್ಳುತ್ತಿರುತ್ತಾರೆ. ಅವರಿಗೆ ಬಜೆಟ್ ವಿರುದ್ಧವಾಗಿ ಮಾತನಾಡಲು ಏನು ಇಲ್ಲದ ಕಾರಣ ನನ್ನ ವಿಚಾರ ಎತ್ತಿ ಮಾತನಾಡುತ್ತಾರೆ. ಮಾತನಾಡಲಿ, ಖುಷಿಪಡಲಿ. ಧೈರ್ಯವಿರುವ ಒಬ್ಬ ವ್ಯಕ್ತಿ ಬಹುಮತ ತರಬಲ್ಲ ಎದು ನಂಬಿರುವವನು ನಾನು” ಎಂದು ತಿಳಿಸಿದರು.

Let the BJP table an official resolution demanding roll back of guarantee schemes: DCM DK Shivakumar

Bengaluru, March 13: Taking a dig at the BJP for demanding a roll back of State government’s guarantee schemes, Deputy Chief Minister DK Shivakumar today challenged the BJP to table a formal resolution in the Assembly to roll back the guarantee schemes.

During a discussion on the budget in the Legislative Assembly, BJP MLA Suresh Gowda who urged the government to stop all the guarantee schemes. Replying to him, the DCM said, “You are a senior leader and the former CM and DCM are also sitting with you. This is not your individual opinion but your Party’s opinion. We will certainly debate it, but let the BJP internally pass this resolution to roll back guarantees and table it in the House. Let us know within the Budget session itself.”

“Yediyurappa had stated that he won’t accept even if one grain is lesser than the promised amount of grains in the guarantee schemes. We implemented the guarantee schemes within 6 months. We listened to you also,” he quipped.

“In Assam, they have the guarantee schemes for BJP party workers only while Congress party workers don’t get it. We have taken a decision on the guarantee schemes, your party can also come to a decision and let us know,” he added.

When Suresh Gowda replied that he had already informed the CM to rethink the guarantee schemes, the DCM said, “We don’t want instances where you have told the CM during dinner meetings or day light meetings. The people of the state and country needs to see your decision. Let us know.”

BJP ‘friends’ don’t get sleep if they don’t take my name
When a BJP member, during the debate, commented that the DCM and CM don’t look at each other, the DCM intervened and said, “Some of my friends in BJP don’t get sleep or feel happy or get inspired if they don’t take my name. Hence, they keep taking my name always. They talk about me as they don’t have anything to talk about the budget. Let them talk, I believe that one man with courage is a majority.”

Related Articles

Back to top button