
ಪ್ರಗತಿವಾಹಿನಿ ಸುದ್ದಿ: 43,000 ರೂಪಾಯಿ ಲಂಚಕ್ಕೆ ಕೈಯೊಡ್ದಿದಾಗಲೇ ಉಪವಲಯ ಅರಣ್ಯಾಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಡಿಆರ್ಎಫ್ ವಿಶ್ವನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಎನ್ಓಸಿ ನೀಡಲು 43,000 ರೂ. ಲಂಚ ಪಡೆಯುತ್ತಿದ್ದ ವೇಳೆ ಗುಡಿಬಂಡೆ ಉಪವಲಯ ಅರಣ್ಯಾಧಿಕಾರಿಯನ್ನು (DRF) ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಕಲ್ಲು ಚಪ್ಪಡಿ ತೆಗೆಯುವುದಕ್ಕೆ ಎನ್ಓಸಿ ನೀಡಲು ಮೂವರು ಜನರಿಂದ 1.5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ 43,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.




