
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪನ್ಯಾಸಕರ ನೇಮಕಾತಿಯಲ್ಲಿ ತಮ್ಮನ್ನು ಪರಿಗಣಿಸುವಂತೆ ಅತಿಥಿ ಉಪನ್ಯಾಸಕರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಡಿಸಿಎಂ ಭೇಟಿಯಾದ ಅತಿಥಿ ಉಪನ್ಯಾಸಕರು ಈ ಮನವಿ ಮಾಡಿದರು. ಅತಿಥಿ ಉಪನ್ಯಾಸಕರ ಮನವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಕರಾತ್ಮಕವಾಗಿ ಸ್ಪಂದಿಸಿದರು.