Kannada NewsKarnataka NewsLatest

*ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ವಿಚಾರವಾಗಿ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಈ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಪ್ರಕಟಸಿದೆ.

ಪರಿಷತ್ ಸದಸ್ಯ ಅ.ದೇವೇಗೌಡ ನಿಯಮ 77ರ ಅಡಿ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಸರ್ಕಾರದ ಗಮನ ಸೆಳೆಯುವ ಸೂಚನೆ ಮಂಡಿಸಿದರು.

ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಸುಧಾಕರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವ ಬಗ್ಗೆ ನಿಯಮಗಳಲ್ಲಿ ಅವಕಾಶವಿಲ್ಲ ಎಂದು ತಿಳಿಸಿದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೆರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಪ್ರಕಾರ ಪರಿಶೀಲನೆ ಮಾಡಲಾಗಿದೆ. ವಿವಿಧ ಮಾನದಂಡ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ 26 ಸಾವಿರದಿಂದ 32 ಸಾವಿರ ರೂ.ವರೆಗೂ ವೇತನ ನೀಡಲಾಗುತ್ತಿದೆ. ಆದರೆ ಅತಿಥಿ ಉಪನ್ಯಾಸಕರನ್ನು ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸಾಧ್ಯವಿಲ್ಲ. ಬದಲಿಗೆ ಕಾಲೇಜುಗಳಲ್ಲಿ ಹೆಚ್ಚುವರಿ ಅವಧಿಗೆ ಶೈಕ್ಷಣಿಕ ವರ್ಷಕ್ಕೆ ಸೀಮಿತವಾಗಿ ತಾತ್ಕಾಲಿಕ ನೇಮಕ ಮಾಡಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button