
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಮ್ಮತಿ ಸೂಚಿಸಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ವೇತನ ಇರುವವರಿಗೆ 32 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಅತಿಥಿ ಉಪನ್ಯಾಸಕರ ಬೇಡಿಕೆ ಬಗ್ಗೆ ವರದಿ ನೀಡಲು ಸಿಎಂ ಬೊಮ್ಮಾಯಿ, ಕುಮಾರ್ ನಾಯಕ್ ನೇತೃತ್ವದ ಸಮಿತಿ ರಚನೆ ಮಾಡಿದ್ದರು. ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ವರದಿ ಅನುಷ್ಠಾನಕ್ಕೆ ಸಿಎಂ ಒಪ್ಪಿದ್ದಾರೆ.
5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಯುಜಿಸಿ ಕ್ವಾಲಿಫಿಕೇಷನ್ ಇರುವ ಅತಿಥಿ ಉಪನ್ಯಾಸಕರಿಗೆ 32 ಸಾವಿರ ವೇತನ ನೀಡಲಾಗುವುದು. ಯುಜಿಸಿ ಕ್ವಾಲಿಫಿಕೇಷನ್ ಇಲ್ಲದ 5 ವರ್ಷ ಸೇವೆ ಸಲ್ಲಿಸಿದವರಿಗೆ 30 ಸಾವಿರ, 5 ವರ್ಷ ಸೇವೆ ಸಲ್ಲಿಸದ, ಯುಜಿಸಿ ಕ್ವಾಲಿಫಿಕೇಷನ್ ಇಲ್ಲದವರಿಗೆ 26 ಸಾವಿರ ವೇತನ ನೀಡಲಾಗುವುದು. ಪ್ರತಿ ತಿಂಗಳ 10ನೇ ತಾರಿಕು ಸಂಬಳ ನೀಡಲಾಗುವು ಪೂರ್ಣ ಪ್ರಮಾಣದಲ್ಲಿ ವರ್ಕ ಲೋಡ್ ಮಾಡಬೇಕು. ಆದರೆ ಅತಿಥಿ ಉಪನ್ಯಾಸಕರ ಖಾಯಂ ಮಾಡಲು ಸಾಧ್ಯವಿಲ್ಲ ಹಾಗೂ ಕೃಪಾಂಕ ನೀಡುವ ಪ್ರಸ್ತಾಪವೂ ಇಲ್ಲ ಎಂದು ತಿಳಿಸಿದ್ದಾರೆ.
ಬೆಳಗಾವಿಯ ಇಬ್ಬರು ಯುವತಿಯರು ನಾಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ