ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಿನ್ನೆ ವಡೋದರಾದ ನಿಜಾಂಪುರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದ ವೇಳೆ ವೇದಿಕೆಯ ಮೇಲೆಯೇ ಸಿಎಂ ವಿಜಯ್ ರೂಪಾಣಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಅಹಮದಾಬಾದ್ ನ ಯು ಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೊರೊನಾ ಪರೀಕ್ಷೆ ನಡೆಸಲಾಗಿತ್ತು.
ಇದೀಗ ವರದಿ ಬಂದಿದ್ದು, ಸಿಎಂ ವಿಜಯ್ ರೂಪಾಣಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸಿಎಂ ಅವರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ