Kannada NewsNationalPolitics
*ಕ್ಷಿಪ್ರ ರಾಜಕೀಯ ಬೆಳವಣಿಗೆ: ಎಲ್ಲಾ ಸಚಿವರ ದಿಢೀರ್ ರಾಜೀನಾಮೆ* *ಸಂಪುಟ ಸಭೆ ಬಳಿಕ ಬೆಳವಣಿಗೆ*

ಪ್ರಗತಿವಾಹಿನಿ ಸುದ್ದಿ: ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಸರ್ಕಾರದ ಎಲ್ಲಾ ಸಚಿವರು ದಿಢೀರ್ ರಾಜೀನಾಮೆ ನೀಡಿದ್ದಾರೆ.
ಗುಜರಾತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಅಹಮದಾಬಾದ್ ನಲ್ಲಿ ಸಿಎಂ ಭೂಪೇಂದ್ರ ಪಟೇಲ್ ನಿವಾಸಲ್ಲಿ ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆ ಬಳಿಕ ಈ ಬೆಳವಣಿಗೆ ನಡೆದಿದೆ.
ನಾಳೆ ಗುಜರಾತ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಮಧ್ಯಾಹ್ನ 12:30ಕ್ಕೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.