Latest

ನರೇಂದ್ರ ಮೋದಿ ಟಾರ್ಗೆಟ್ ಮಾಡಿಯೇ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಉಗ್ರರು

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: 2008ರಲ್ಲಿ ನಡೆದಿದ್ದ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಯೊಂದನ್ನು ಗುಜರಾತ್ ವಿಶೇಷ ನ್ಯಾಯಾಲಯ ಬಹಿರಂಗಪಡಿಸಿದ್ದು, ಅಂದಿನ ಸಿಎಂ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲೆಂದೇ ಉಗ್ರರು ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟ ನಡೆಸಿದ್ದರು ಎಂಬ ವಿಷಯವನ್ನು ಪ್ರಸ್ತಾಪಿಸಿದೆ.

ಪ್ರಧಾನಿ ಮೋದಿಯವರನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು. ಇತರೆ ಸ್ಥಳಗಳಲ್ಲಿ ನಡೆದ ಸ್ಫೋಟದಲ್ಲಿ ಮೃತಪಟ್ಟವರನ್ನು ಹಾಗೂ ಗಾಯಗೊಂಡವರನ್ನು ನೋಡಲು ಮೋದಿ ಆಸ್ಪತ್ರೆಗೆ ಭೇಟಿ ನೀಡಿಯೇ ನೀಡುತ್ತಾರೆ ಎನ್ನುವುದು ಉಗ್ರರಿಗೆ ಗೊತ್ತಿತ್ತು. ಈ ಕಾರಣಕ್ಕೆ ಮೋದಿ ಹತ್ಯೆಗೆ ಆಸ್ಪತ್ರೆಗಳೇ ಸೂಕ್ತ ಸ್ಥಾನ ಎಂದು ಉಗ್ರರು ಆಸ್ಪತ್ರೆಗಳನ್ನು ಗುರಿಯಾಗಿಸಿ ಕೃತ್ಯ ಎಸಗಿದರು ಎಂಬ ಅಂಶ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಪ್ರಕರಣದ ಕುರಿತು 164 ಮಂದಿ ಹೇಳಿಕೆ ನೀಡಿದ್ದು, ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯನ್ನು ನಿಷೇಧ ಮಾಡಿದ್ದಕ್ಕೆ ಸಾಮೂಹಿಕ ಹತ್ಯೆ ಎಸಗಲು ಸಂಚು ರೂಪಿಸಿದ್ದರು ಎಂದು ವರದಿಯಾಗಿದೆ.

ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 38 ಅಪರಾಧಿಗಳಿಗೆ ಗಲ್ಲುಶಿಕ್ಷೆ ನೀಡಿರುವ ನ್ಯಾಯಾಲಯ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
58 ವಿದ್ಯಾರ್ಥಿನಿಯರು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button