ಪ್ರಗತಿವಾಹಿನಿ ಸುದ್ದಿ; ವಡೋದರ: ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ. ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 23 ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಹಿಂದೆ ಕೂಡ ಗುಜರಾತ್ ನಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 10ಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ