ಪ್ರಗತಿವಾಹಿನಿ ಸುದ್ದಿ; ಗಾಂಧಿನಗರ: ಗುಜರಾತ್ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಅಚ್ಚರಿ ಹೆಸರು ಘೋಷಿಸಲಾಗಿದ್ದು, ಭೂಪೇಂದ್ರ ಪಟೇಲ್ ಅವರ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.
ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಗಾಂಧಿನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಘೋಷಿಸಲಾಯಿತು.
ಗುಜರಾತ್ ಸಿಎಂ ಸ್ಥಾನಕ್ಕಾಗಿ ನಿತಿನ್ ಪಟೇಲ್ ಹಾಗೂ ಸಿ ಆರ್ ಪಟೇಲ್ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಇದೀಗ ಬಿಎಲ್ ಪಿ ಸಭೆಯಲ್ಲಿ ಬಿಜೆಪಿ ನಾಯಕರು ಘಾಟ್ ಲೋದಿಯಾ ಕ್ಷೇತ್ರದ ಶಾಸಕ ಭೂಪೇಂದ್ರ ಪಟೇಲ್ ಹೆಸರನ್ನು ಆಯ್ಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಇನ್ನು ಬಿಎಲ್ ಪಿ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನರೇಂದ್ರ ಸಿಂಗ್ ತೋಮರ್ ಬಿಜೆಪಿ ವೀಕ್ಷಕರಾಗಿ ಆಗಮಿಸಿದ್ದರು. ಕೇಂದ್ರ ಸಚಿವ ಮನ್ ಸುಖ್ ಮಾಂಡವೀಯ, ಸಿ.ಆರ್.ಪಟೇಲ್, ನಿತಿನ್ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು.
ಹಿಂದೂ ಸಂಘಟನೆಗಳ ವಿರೋಧ; ಸಂಸದ ಪ್ರತಾಪ್ ಸಿಂಹ ಆಕ್ರೋಶ -101 ಗಣಪತಿ ದೇವಾಲಯಗಳ ತೆರವು?-
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ