ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಗುಜರಾತ್ ಚುನಾವಣೆಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 1ರಂದು ಮೊದಲ ಹಂತದಲ್ಲಿ ಹಾಗೂ ಡಿಸೆಂಬರ್ 5ರಂದು 2ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗುಜರಾತ್ ಜುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. 4.61 ಲಕ್ಷ ಜನರು ಮೊದಲ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 51 ಸಾವಿರಕ್ಕೂ ಹೆಚ್ಚು ಮತಗಟ್ಟೆ ಸ್ಥಾಪಿಸಲಾಗುವು. ಮಹಿಳೆಯರು, ವೃದ್ಧರು, ಅಂಗವಿಕಲರಿಗಾಗಿ ಪ್ರವೇಶ ಹಾಗೂ ಸೇರ್ಪಡೆಗಾಗಿ ವಿಶೇಷ ವೀಕ್ಷಕರನ್ನು ಚುನಾವಣೆಯಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದರು.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಅಧಿಕಾರಕ್ಕೇರಲು 92 ಸದಸ್ಯರ ಬೆಂಬಲ ಅಗತ್ಯವಿದೆ.
ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಕೇಸ್; ಆಘಾತಕಾರಿ ಮಾಹಿತಿ ಬಹಿರಂಗ
https://pragati.taskdun.com/latest/mla-renukacharyabrother-sonchandrashekhar-missing-caseshocking-news/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ