Latest

ಗುಜರಾತ್ ನಲ್ಲಿ BJP ಪ್ರಚಂಡ ಗೆಲುವು: ಡಿಸೆಂಬರ್ 12ರಂದು ಸಿಎಂ ಪ್ರಮಾಣವಚನ

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ್ದು, ಭೂಪೇಂದ್ರ ಪಟೇಲ್ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಖಚಿತವಾಗಿದೆ.

ಗುಜರಾತ್ ನಲ್ಲಿ ಬಿಜೆಪಿ 158 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 16, ಆಪ್ 5 ಹಾಗೂ ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸುತ್ತಿದ್ದಂತೆ ಮುಖ್ಯಮಂತ್ರಿ ಭುಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅದ್ಧೂರಿ ಸಮಾರಂಭಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.

ಡಿಸೆಂಬರ್ 12ರಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭೂಪೆಂದ್ರ ಪಟೇಲ್ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಈ ಕುರಿತು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್.ಪಟೇಲ್ ಮಾಹಿತಿ ನೀಡಿದ್ದಾರೆ. ಎಂದು ತಿಳಿದುಬಂದಿದೆ.

ಹಿಮದ ನಾಡಿನಲ್ಲಿ ಕಾಂಗ್ರೆಸ್ ಕಮಾಲ್; ಕುತೂಹಲದತ್ತ ಫಲಿತಾಂಶ

https://pragati.taskdun.com/himachala-pradeshagujarathelection-result/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button