Latest

ಗುಜರಾತ್ ನಲ್ಲಿ ಸತತ 7ನೇ ಬಾರಿ BJP ಅಧಿಕಾರಕ್ಕೆ; ಸಿಎಂ ಬೊಮ್ಮಾಯಿ ಸಂತಸ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಘಟ್ಟ ತಲುಪಿದ್ದು, ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ.

ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ. ಗುಜರಾತ್ ನಲ್ಲಿ ಬಿಜೆಪಿ ಸತತ 7ನೇ ಬಾರಿಗೆ ಅಧಿಕಾರದ ಚುಕಾಣಿ ಹಿಡಿಯಲಿದೆ ಎಂದು ತಿಳಿಸಿದರು.

ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ. ಭಾಜಪ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆ ಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದರು.

ಮೋದಿಯವರ ನಾಯಕತ್ವ
ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ. ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೋಲಿಕೆ ಸಲ್ಲದು
ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹುಆಯಾಮದ ಸ್ಪರ್ಧೆ ಇರುತ್ತದೆ ಮುನಿಸಿಪಲ್ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಹೋಲಿಕೆ ಮಾಡಲಾಗುವುದಿಲ್ಲ ಎಂದರು.

ಜಯ ನಿಶ್ಚಿತ
ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ ಜಯ ನಿಶ್ಚಿತ ಎಂದರು.

ಯಾವುದೂ ನಿಜವಾಗಿಲ್ಲ
ಚುನಾವಣಾ ಫಲಿತಾಂಶ ಪರಿಣಾಮ ಬೀರುವುದಿಲ್ಲ ಎಂದಿರುವ ವಿಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿಗಳು ಅವರು ಹಾಗೆಯೇ ಹೇಳಬೇಕು. ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ ಎಂದರು.

ಇದೇ ವೇಳೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸಧ್ಯದಲ್ಲಿ ಕೊಂಚ ಹಿನ್ನಡೆಯಲ್ಲಿದ್ದರೂ ಅಂತಿಮವಾಗಿ ಬಿಜೆಪಿಯೇ ಗೆಲುವು ಸಾಧಿಸಲಿದೆ ಹಿಮಾಚಲ ಪ್ರದೇಶದಲ್ಲಿಯೂ ಎರಡನೇ ಬಾರಿಗೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ವಿಶ್ವಾವಿದೆ ಎಂದು ಹೇಳಿದರು.

ಇದೇ ವೇಳೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸಧ್ಯದಲ್ಲಿ ಕೊಂಚ ಹಿನ್ನಡೆಯಲ್ಲಿದ್ದರೂ ಅಂತಿಮವಾಗಿ ಬಿಜೆಪಿಯೇ ಗೆಲುವು ಸಾಧಿಸಲಿದೆ ಹಿಮಾಚಲ ಪ್ರದೇಶದಲ್ಲಿಯೂ ಎರಡನೇ ಬಾರಿಗೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂಬ ವಿಶ್ವಾವಿದೆ ಎಂದು ಹೇಳಿದರು.

ಗುಜರಾತ್ ಫಲಿತಾಂಶ: ಸಾರ್ವಕಾಲಿಕ ದಾಖಲೆ ಬರೆದ BJP

https://pragati.taskdun.com/gujarathvidhanasabha-electionbjp-new-record/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button