ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಆರಂಭವಾಗಿದೆ.
ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಿಜೆಪಿಗೆ ಪೈಪೋಟಿ ನೀಡಿದ್ದು, ಸಧ್ಯದ ಮಾಹಿತಿ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಗುಜರಾತ್ ನಲ್ಲಿ 139 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 36 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 9 ಕ್ಷೇತ್ರಗಳಲ್ಲಿ ಆಪ್ ಹಾಗೂ 4 ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳು ಮುನ್ನಡೆಯಲಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ 33 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.
ಬೆಳಗಾವಿ: ಭೀಕರ ಅಪಘಾತಕ್ಕೆ ಇಬ್ಬರು ಬಲಿ
https://pragati.taskdun.com/2-death-in-accident-2/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ