ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ಕ್ಷಣ ಕ್ಷಣಕ್ಕೂ ಫಲಿತಾಂಶ ರೋಚಕ ಘಟ್ಟ ತಲುಪಿದೆ. ಗುಜರಾತ್ ನಲ್ಲಿ ಬಿಜೆಪಿ ಸಾರ್ವಕಾಲಿಕ ದಾಖಲೆಯತ್ತ ಸಾಗಿದೆ.
ಗುಜರಾತ್ ನಲ್ಲಿ ಬಿಜೆಪಿ 155 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 1985ರಲ್ಲಿ ಕಾಂಗ್ರೆಸ್ ಪಡೆದುಕೊಂಡಿದ್ದ ದಾಖಲೆಯನ್ನು ಬಿಜೆಪಿ ಮುರಿದಿದೆ. ಈ ಮೂಲಕ ಕೇಸರಿ ಪಾಳಯ ಹೊಸ ದಾಖಲೆ ಬರೆದಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ 1985ರಲ್ಲಿ ಗುಜರಾತ್ ನಲ್ಲಿ ಕಾಂಗ್ರೆಸ್ 149 ಸೀಟ್ ಗಳನ್ನು ಗೆಲ್ಲುವ ಮೂಲಕ ಅನುಕಂಪದ ಮತಗಳನ್ನು ಗೆದ್ದು ದಾಖಲೆ ಬರೆದಿತ್ತು. ಇದೀಗ ಬಿಜೆಪಿ ಆ ದಾಖಲೆ ಮುರಿದು 155 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸಧ್ಯದ ಮಾಹಿತಿ ಪ್ರಕಾರ ಗುಜರಾತ್ ನಲ್ಲಿ 155 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, 7 ಕ್ಷೇತ್ರಗಳಲ್ಲಿ ಆಪ್ ಹಾಗೂ 5 ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳು ಮುನ್ನಡೆಯಲಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ 35 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ 30 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರೆ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.
ಗುಜರಾತ್ ಸಿಎಂ ಭುಪೇಂದ್ರ ಪಟೇಲ್ ಭಾರಿ ಮುನ್ನಡೆ
https://pragati.taskdun.com/gujarathhimachalapradeshaelection-resultvote-counting-2/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ