Latest

ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; ಇಬ್ಬರು ಸಜೀವದಹನ

ಪ್ರಗತಿವಾಹಿನಿ ಸುದ್ದಿ; ಸೂರತ್: ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ.

ಇಂದು ಮುಂಜಾನೆ ಸಂಭವಿಸಿದ ಈ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 125 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ.

ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ರಕ್ಷಿಸಲು ಕ್ರೇನ್ ಗಳನ್ನು ಬಳಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯ ಸದಸ್ಯೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button