Kannada NewsKarnataka NewsLatest

*ವಿಶ್ವವಿದ್ಯಾಲಯದ ಕುಲಪತಿಗೆ ಆಸಿಡ್ ದಾಳಿ ಬೆದರಿಕೆ; ಅನಾಮಧೇಯ ವ್ಯಕ್ತಿಯಿಂದ ಪತ್ರ*

ಪ್ರಗತಿವಾಹಿನಿ ಸುದ್ದಿ: ವಿಶ್ವ ವಿದ್ಯಾಲಯದ ಕುಲಪತಿಗಳಿಗೆ ಆಸಿಡ್ ದಾಳಿ ನಡೆಸಿರುವುದಾಗಿ ಬೆದರಿಕೆ ಪತ್ರ ರವಾನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

Home add -Advt

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಕಳುಹಿಸಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಪತ್ರ ರವಾನಿಸಲಾಗಿದೆ.

2024ರಲ್ಲಿ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ವಿವಿಯ ಆಂತರಿಕ ಸಮಿತಿಯ ವರದಿಯಿಂದ ದೃಢಪಟ್ಟಿತ್ತು. ಕುಲಪತಿಗಳು ಈ ವಿಷಯವನ್ನು ತಕ್ಷಣವೇ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತಂದಿದ್ದರು. ರಾಜ್ಯಪಾಲರ ಆದೇಶದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಸಮಿತಿಯ ಸೂಚನೆಯ ಮೇರೆಗೆ ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ.

ಬೆದರಿಕೆ ಪತ್ರದಲ್ಲಿ 2 ಲಕ್ಷ ರೂಪಾಯಿ ನೀಡಿ ಬಿಇಡಿ ಪ್ರವೇಶ ಪಡೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ವಿವಿಯ ಸತ್ಯಶೋಧನಾ ಸಮಿತಿಯ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಒಂದು ವೇಳೆ ಮರುಮೌಲ್ಯಮಾಪನದಿಂದಾಗಿ ಅಂಕಗಳು ಕಡಿಮೆಯಾದರೆ ಅಥವಾ ನಾವು ಅನುತ್ತೀರ್ಣರಾದರೆ, ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ಬದುಕುವಂತೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದರಿಂದ ಆತಂಕಕ್ಕೊಳಗಾಗಿರುವ ಕುಲಪತಿ ಶಶಿಕಾಂತ್ ಕೋರ್ಟ್ ಮೆಟ್ಟಿಲೇರಿದ್ದು, ಕೋರ್ಟ್ ನಿರ್ದೇಶನದಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button