CrimeKarnataka NewsLatest

*ಅಕ್ರಮ ಗನ್ ದಂಧೆ: 7 ಜನರು ಅರೆಸ್ಟ್*

ರಾಜಕಾರಣಿಗಳು, ಉದ್ಯಮಿಗಳ ಜೊತೆಯೂ ಸಂಪರ್ಕ ಶಂಕೆ

ಪ್ರಗತಿವಾಹಿನಿ ಸುದ್ದಿ: ಅಕ್ರಮವಾಗಿ ಗನ್ ಗಳನ್ನು ಡೀಲ್ ಮಾಡಿ ಮಾರಾಟ ಮಡುತ್ತಿದ್ದ ಪ್ರಕರಣ ಸಂಬಂಧ ಏಳು ಜನರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪ್ರದೀಪ್ ರಮೇಶ್, ಮನೋಜ್ ಅಲಿಯಾಸ್ ಜಾಕಿ, ರಿಜ್ವಾನ್ ಪಾಷಾ, ನಂಜಪ್ಪ, ವೆಂಕಟರಾಜು, ಸುಣವಾರ ಗೋಪಿ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಐದು ಕಂಟ್ರಿಮೇಡ್ ಪಿಸ್ತೂಲ್ ಹಾಗೂ 10 ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆಗಸ್ಟ್ 14ರಂದು ಗಸ್ತಿನಲ್ಲಿದ್ದ ಪೊಲೀಸರಿಗೆ ಹಾಲ್ದೇನಹಳ್ಳಿ ರೈಲ್ವೆ ಗೇಟ್ ಬಳಿ ಬ್ಯಾಗ್‌ನೊಂದಿಗೆ ನಿಂತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದ. ಪರಿಶೀಲನೆ ವೇಳೆ ಆತನ ಬಳಿಯಿಂದ ಮೂರು ಕಂಟ್ರಿಮೇಡ್ ಪಿಸ್ತೂಲ್ ಹಾಗೂ 10 ಗುಂಡುಗಳು ಪತ್ತೆಯಾಗಿದ್ದವು. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಂಟ್ರಿಮೇಡ್ ಪಿಸ್ತೂಲ್ ಮಾರಾಟದ ದಂಧೆಯ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಈ ಅಕ್ರಮ ಗನ್ ದಂಧೆಗೆ ಮಧ್ಯಪ್ರದೇಶದ ಲಿಂಕ್ ಇರುವುದು ತನಿಖೆಯಲ್ಲಿ ಬಯಲಾಗಿದೆ. ಆರೋಪಿಗಳಿಗೆ ರಾಜಕಾರಣಿಗಳು ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಸಂಪರ್ಕ ಇರುವ ಬಗ್ಗೆ ಅನುಮಾನವಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button