ಪ್ರಗತಿವಾಹಿನಿ ಸುದ್ದಿ: ಲೈಂಗಿಕ ಕಿರುಕುಳ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಗುರಪ್ಪ ನಾಯ್ಡುರನ್ನು ಉಚ್ಛಾಟನೆ ಮಾಡಲಾಗಿದೆ.
ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಈ ಆದೇಶ ಹೊರಡಿಸಿದ್ದು, ಗುರಪ್ಪ ನಾಯ್ಡುರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ತ್ಯಾಗರಾಜನಗರದ ಬಿಜಿಎಸ್ ಬ್ಲೂಮ್ ಫೀಲ್ಡ್ ಶಾಲೆಯ ಅಧ್ಯಕ್ಷರೂ ಆಗಿರುವ ಗುರಪ್ಪ ನಾಯ್ಡು ಶಿಕ್ಷಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದರ ವಿಡಿಯೋ ಮಾಡಿಟ್ಟುಕೊಂಡು ಬೆದರಿಕೆ ಹಾಕುತ್ತಿದ್ದ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ 6 ವರ್ಷ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ