Film & Entertainment

*ಇಂದೇ ನೆರವೇರಲಿದೆ ನಿರ್ದೇಶಕ ಗುರುಪ್ರಸಾದ್ ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದು, ಇಂದೇ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಅವರು ನೇಣಿಗೆ ಕೊರಳೊಡ್ಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಅವರ ಸಾವಿನ ಬಗ್ಗೆ ವಿಷಯ ತಿಳಿದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

Home add -Advt

ಬಳಿಕ ಅಂತಿಮ ವಿಧಿವಿಧಾನಗಳ ನಂತರ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಇಂದೇ ಗುರುಪ್ರಸಾದ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಗೆ ನಟರಾದ ಡಾಲಿ ಧನಂಜಯ್, ದುನಿಯಾ ವಿಜಯ್, ನೀನಾಸಂ ಸತೀಶ್ ಮೊದಲಾದವರು ಭೇಟಿ ನೀಡಿ, ಗುರುಪ್ರಸಾದ್ ಎರಡನೇ ಪತ್ನಿ ಸುಮಿತ್ರಾ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ.

Related Articles

Back to top button