Karnataka News
*ಜಾತ್ರಾ ಮಹೋತ್ಸವದ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಜಾತ್ರಾಮಹೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.
24 ವರ್ಷದ ದೇವೇಂದ್ರ ಬಡಿಗೇರ್ ಮೃತ ದುರ್ದೈವಿ. ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ರಥ ಎಳೆಯುತ್ತಿದ್ದಾಗ ನೂಕುನುಗ್ಗಲು ಉಂಟಾಗಿ ಯುವಕ ಆಯತಪ್ಪಿ ಬಿದ್ದಿದ್ದಾನೆ. ಈ ವೇಳೆ ರಥದ ಚಕ್ರಕ್ಕೆ ಯುವಕ ಸಿಲುಕಿ ಸಾವನ್ನಪ್ಪಿದ್ದಾನೆ.
ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




