ಸಧ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯವಿಲ್ಲ: ಎಸ್ ಆರ್ ವಿಶ್ವನಾಥ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಸಾಧ್ಯತೆಯಿದೆ. ಸಂಪುಟ ವಿಸ್ತರಣೆ ಬಗ್ಗೆ ಏನೇ ಚರ್ಚೆ ನಡೆಯಬಹುದು ಆದರೆ ಸಧ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯವಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆಯುವ ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಸಮಾವೇಶಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಅಮಿತ್ ಶಾ ಒಂದೇ ವಿಮಾನದಲ್ಲಿ ತೆರಳುತ್ತಿದ್ದಾರೆ. ಈ ವೇಳೆ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಆದರೆ ಏನೇ ಚರ್ಚೆ, ತೀರ್ಮಾನ ಕೈಗೊಂಡರೂ ಸಧ್ಯಕ್ಕಂತೂ ಸಂಪುಟ ವಿಸ್ತರಣೆ ಇಲ್ಲ ಎಂದು ಮಾಹಿತಿ ನೀಡಿದರು.

Home add -Advt

ಈ ಮೂಲಕ ಅಮಿತ್ ಶಾ ರಾಜ್ಯ ಭೇಟಿ ವೇಳೆ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರವಾಗಲಿದೆ ಎಂದು ಕಾಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.

Related Articles

Back to top button